
ಹಿಂದಿ ಚಿತ್ರರಂಗದ ಖ್ಯಾತ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಬೆಳಿಗ್ಗೆ ಗೋವಾದ ತಮ್ಮ ನಿವಾಸದಲ್ಲಿ, ತೀವ್ರ ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ.
ಇವರಿಗೆ ಬೆಳಿಗ್ಗೆ 5:20ರ ಸುಮಾರಿಗೆ ತೀವ್ರ ಹೃದಯ ಸ್ತಂಭನ ಉಂಟಾಗಿದ್ದು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳಿದಿದ್ದಾರೆ ಎಂದು ಮಣಿಪಾಲ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಅದ್ಭುತ ಅಭಿನಯದ ಮೂಲಕ ಹಿಂದಿ ಮತ್ತು ಮರಾಠಿ ಚಿತ್ರರಂಗದಲ್ಲಿ ತನ್ನದೇ ಅಭಿಮಾನಿಗಳನ್ನು ಹೊಂದಿದ್ದ ನಟ, ತನ್ನ ವಿಶಿಷ್ಟ ಸಂಭಾಷಣೆಯ ಶೈಲಿಗೆ ಹೆಸರಾಗಿದ್ದರು. ಇವರ ಅತ್ಯುತ್ತಮ ನಟನೆಗಾಗಿ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಲಭಿಸಿದೆ.






















