33.1 C
Udupi
Monday, October 12, 2026
spot_img
spot_img
HomeBlogಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ.7.5 ಒಳಮೀಸಲಾತಿ

ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ.7.5 ಒಳಮೀಸಲಾತಿ

ಬೆಂಗಳೂರು: ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮೆಡಿಕಲ್, ಇಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶದಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಒಳಮೀಸಲಾತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಈ ಸಂಬಂಧ ಸೆಪ್ಟೆಂಬರ್ 17ರಂದು ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಸಾರ್ವಜನಿಕರಿಂದ ಬಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪರಿಶೀಲಿಸಿದ ಬಳಿಕ ಅಕ್ಟೋಬರ್ 8ರಂದು ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸಿದೆ.

ಪ್ರಸ್ತುತ ಜಾರಿಯಲ್ಲಿರುವ ಶೇ.15ರಷ್ಟು ಗ್ರಾಮೀಣ ಮೀಸಲಾತಿಯೊಳಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಒಳಮೀಸಲಾತಿ ಕಲ್ಪಿಸಲಾಗುತ್ತದೆ. ಇದರಿಂದ ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಪಡೆಯಲು ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಾರೇಕೊಪ್ಪ ಬಂಗಾರಪ್ಪ ಅವರ ಕನಸನ್ನು ಈ ನಿರ್ಧಾರ ಸಾಕಾರಗೊಳಿಸಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. ಗ್ರಾಮೀಣ ಯುವಕರು ಸರ್ಕಾರಿ ಉದ್ಯೋಗ ಪಡೆದು ಆಡಳಿತ ವ್ಯವಸ್ಥೆಯಲ್ಲಿ ಭಾಗಿಯಾಗಬೇಕೆಂಬ ಉದ್ದೇಶದಿಂದ ಬಂಗಾರಪ್ಪ ಅವರು ತಮ್ಮ ಅಧಿಕಾರಾವಧಿಯಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಗ್ರೇಸ್ ಅಂಕ ನೀಡುವ ಯೋಜನೆ ಜಾರಿಗೆ ತಂದಿದ್ದರು.

ನಂತರ ಗ್ರೇಸ್ ಅಂಕಗಳ ಬದಲಿಗೆ ಗ್ರಾಮೀಣ ಅಭ್ಯರ್ಥಿಗಳಿಗೆ ಮೀಸಲಾತಿ ವ್ಯವಸ್ಥೆ ಜಾರಿಗೊಂಡಿತ್ತು. ಇದೀಗ ಅದೇ ವ್ಯವಸ್ಥೆಯನ್ನು ಶಿಕ್ಷಣ ಕ್ಷೇತ್ರಕ್ಕೂ ವಿಸ್ತರಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page