
ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸಾಧಾರಣ ಮಳೆ/ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಚಿಕ್ಕಮಗಳೂರು ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಮಳೆ ಸಂಭವಿಸುವ ಸಾಧ್ಯತೆಯಿದೆ.
ಮಂಗಳೂರು: 31-27
ಉಡುಪಿ: 31-27