29 C
Udupi
Monday, October 12, 2026
spot_img
spot_img
HomeBlogದಸರಾ ಹಬ್ಬದ ಸಂಭ್ರಮದ ಸಂದರ್ಭದಲ್ಲಿ, ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ಖಂಡನೀಯ

ದಸರಾ ಹಬ್ಬದ ಸಂಭ್ರಮದ ಸಂದರ್ಭದಲ್ಲಿ, ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ಖಂಡನೀಯ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಆದ್ಯತೆ ನೀಡುವ ಸರಕಾರ… ದಸರಾ ಆಚರಣೆಗೂ ಅವಕಾಶ ಕಲ್ಪಿಸಿ

ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್

ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಅಕ್ಟೋಬರ್ 12ರಿಂದ 28ರವರೆಗೆ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ನೂರಾರು ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ನಡೆಸಿದ್ದಾರೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿಚಾರ ಬಂದಾಗ ಎಲ್ಲಿಲ್ಲದ ಆದ್ಯತೆ ನೀಡುವ ಸರ್ಕಾರ ಈಗ ವಿದ್ಯಾರ್ಥಿಗಳ ಭಾವನೆಗೆ ಬೆಲೆ ಕೊಡಬೇಕು ಎಂದು ಹೇಳಿದ್ದಾರೆ.


ದಸರಾ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುತ್ತಿರುವುದು ಖಂಡನೀಯ. ವಿದ್ಯಾರ್ಥಿಗಳ ಭಾವನೆಗಳಿಗೆ ಬೆಲೆ ನೀಡದೆ, ಹಬ್ಬದ ಸಂದರ್ಭದಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವ ಕಾಲೇಜು ಆಡಳಿತ ಮಂಡಳಿಯ ಧೋರಣೆ ಸರಿಯಲ್ಲ.ಮಂಗಳೂರು ದಸರಾ ಕರಾವಳಿಯ ಪ್ರಮುಖ ಸಾಂಸ್ಕೃತಿಕ ಉತ್ಸವ. ವಿದ್ಯಾರ್ಥಿಗಳು ತಮ್ಮ ಕುಟುಂಬದೊಂದಿಗೆ ಹಬ್ಬವನ್ನು ಆಚರಿಸಲು ಹಾಗೂ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ. ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸಿ ಪರೀಕ್ಷೆಗಳನ್ನು ಮುಂದೂಡುವ ಬದಲು, ನಿಗದಿತ ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಸಲು ಹಠ ಹಿಡಿಯುವುದು ವಿದ್ಯಾರ್ಥಿಗಳ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಇತರ ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂಬ ವಿದ್ಯಾರ್ಥಿಗಳ ಹೇಳಿಕೆಯ ಹಿನ್ನೆಲೆಯಲ್ಲಿ ಸೈಂಟ್ ಆಗ್ನೆಸ್ ಕಾಲೇಜು ಆಡಳಿತ ಮಂಡಳಿ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಪರೀಕ್ಷೆಗಳನ್ನು ಮುಂದೂಡಿ, ದಸರಾ ಆಚರಣೆಗೆ ಅವಕಾಶ ಕಲ್ಪಿಸಬೇಕು.
ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗೆ ಕಾಲೇಜು ಆಡಳಿತ ಮಂಡಳಿ ಸ್ಪಂದಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು. ವಿದ್ಯಾರ್ಥಿಗಳ ಭಾವನೆಗಳನ್ನು ಗೌರವಿಸಿ, ಅವರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page