
ಹಾಸನ: ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ ಘಟನೆ ಹಾಸನದ ಈಚನಹಳ್ಳಿ ಬಳಿ ನಡೆದಿದೆ.
ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಹಾಗೂ ರಾಕೇಶ್ ಘಟನೆಯಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಮೃತರು ಹೊಸಕೋಟೆ ತಾಲೂಕಿನ ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು ಎಂದು ತಿಳಿದು ಬಂದಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಹಾರಿ ಕಂಟೇನರ್‌ಗೆ ಗುದ್ದಿದ ಪರಿಣಾಮ ಘಟನೆ ಸಂಭವಿಸಿದೆ.