33.5 C
Udupi
Wednesday, October 14, 2026
spot_img
spot_img
HomeBlogಜಂತರ್ ಮಂತರ್ ಪ್ರತಿಭಟನೆ: ಅಶುತೋಷ್ ರಾಂಕಾ, ಸೌರವ್ ದಾಸ್ ತಿಹಾರ್ ಜೈಲಿಗೆ

ಜಂತರ್ ಮಂತರ್ ಪ್ರತಿಭಟನೆ: ಅಶುತೋಷ್ ರಾಂಕಾ, ಸೌರವ್ ದಾಸ್ ತಿಹಾರ್ ಜೈಲಿಗೆ

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿಯ ನಾಯಕರಾದ ಅಶುತೋಷ್ ರಾಂಕಾ ಹಾಗೂ ಸೌರವ್ ದಾಸ್ ಅವರನ್ನು ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತಿಹಾರ್ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶಾಂತಿ ಕಾಪಾಡುವ ಬಾಂಡ್ ಉಲ್ಲಂಘನೆ ಹಾಗೂ ಪ್ರತಿಭಟನೆಗೆ ಅನುಮತಿ ಇಲ್ಲದ ಜಂತರ್ ಮಂತರ್ ಪ್ರದೇಶಕ್ಕೆ ಪ್ರವೇಶಿಸಿದ ಆರೋಪದ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಅಜಿಂಕ್ಯ ಶಿಂದೆ ಅವರ ಜಾಮೀನು ಪ್ರಕ್ರಿಯೆ ನಡೆಯುತ್ತಿದ್ದು, ಮೂವರನ್ನು ಬುಧವಾರ ಬೆಳಿಗ್ಗೆ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು.

ಬ್ಯಾರಿಕೇಡ್‌ಗಳನ್ನು ದಾಟಿ ಜಂತರ್ ಮಂತರ್ ಪ್ರವೇಶಿಸಿದ್ದ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಘೋಷಣೆ ಕೂಗಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅತಿಕ್ರಮಣ ಪ್ರವೇಶ, ಪ್ರತಿಬಂಧಕಾಜ್ಞೆ ಉಲ್ಲಂಘನೆ, ಶಾಂತಿ ಬಾಂಡ್ ಉಲ್ಲಂಘನೆ ಹಾಗೂ ಸರ್ಕಾರಿ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಗಳನ್ನು ಹೊರಿಸಲಾಗಿದೆ.

ಇದಕ್ಕೂ ಮುನ್ನ ಶನಿವಾರದ ಪ್ರತಿಭಟನೆಗೆ ಸಂಬಂಧಿಸಿದಂತೆ ರಾಂಕಾ, ದಾಸ್ ಹಾಗೂ ಅಭಿಜಿತ್ ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದರು. ಒಂದು ವರ್ಷದವರೆಗೆ ಶಾಂತಿ ಕಾಪಾಡುವ ಬಾಂಡ್‌ಗೆ ಸಹಿ ಹಾಕಿದ ಬಳಿಕ ಮ್ಯಾಜಿಸ್ಟ್ರೇಟ್ ಅವರನ್ನು ಬಿಡುಗಡೆ ಮಾಡಿದ್ದರು.

ಈ ಬೆಳವಣಿಗೆಯನ್ನು ಖಂಡಿಸಿರುವ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ತಮ್ಮ ನಾಯಕರನ್ನು ಜೈಲಿಗೆ ಕಳುಹಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಂತರ್ ಮಂತರ್‌ನಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದೇ ಅವರ ತಪ್ಪೇ ಎಂದು ಪ್ರಶ್ನಿಸಿದ ಅವರು, ಭಿನ್ನ ಧ್ವನಿಗಳನ್ನು ಅಡಗಿಸಲು ಇಷ್ಟೊಂದು ಆಸಕ್ತಿ ಇದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಡಿತನದ ತಂತ್ರಗಳನ್ನು ಬಿಟ್ಟು ಅಧಿಕೃತವಾಗಿ ತುರ್ತು ಪರಿಸ್ಥಿತಿ ಘೋಷಿಸುವ ಧೈರ್ಯ ತೋರಿಸಲಿ ಎಂದು ಸವಾಲು ಹಾಕಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page