
ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ.
ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ವಿಜಯಪುರ ,ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಇರಲಿದೆ.






















