
ರಾಜ್ಯದಲ್ಲಿ ವಾಯುಭಾರ ಕುಸಿತದ ಕಾರಣ ಅಕ್ಟೋಬರ್ 22ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಕರಾವಳಿ ಉತ್ತರ ಒಳ ನಾಡಿನ ಹಲವೆಡೆ, ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ ,ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಡಲ ತೀರದ ಭಾಗಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.






















