29.4 C
Udupi
Saturday, October 17, 2026
spot_img
spot_img
HomeBlogಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕರ - ಪೋಷಕರ ಸಭೆ

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕರ – ಪೋಷಕರ ಸಭೆ

  ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ ಬುನಾದಿ ಹಾಕುವ ಉದ್ದೇಶದಿಂದ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಶಿಕ್ಷಕ- ಪೋಷಕರ ಸಭೆ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ದಿನಾಂಕ:16- 10- 2026 ರಂದು ನಡೆಯಿತು. ಅಂಕಗಳಾಚೆಗೆ ಜ್ಞಾನ, ಪಠ್ಯಕ್ರಮದಾಚೆಗೆ ಗುರಿ, ಶಿಕ್ಷಣದಾಚೆಗೆ ಬದುಕಿನ ಸಾಧನೆ ಎಂಬ ಆಶಯಕ್ಕೆ ಪೂರಕವಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಕಲಿಕಾ ಸಾಮರ್ಥ್ಯ, ಶಿಸ್ತು, ಭವಿಷ್ಯದ ಗುರಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು.
       ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಹ ಸಂಸ್ಥಾಪಕರಾದ ಶ್ರೀ ಗಣಪತಿ ಭಟ್ ಕೆ. ಎಸ್. ರವರು  ಶಿಕ್ಷಣದ ಈ ಹಂತದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಅವರ ಉನ್ನತ ಶಿಕ್ಷಣ ಮತ್ತು ವೃತ್ತಿಜೀವನಕ್ಕೆ ದಾರಿದೀಪವಾಗುತ್ತವೆ. ಈ ನಿಟ್ಟಿನಲ್ಲಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಉನ್ನತ ಶಿಕ್ಷಣದ ಪ್ರವೇಶ ಪರೀಕ್ಷೆಗಳಲ್ಲಿಯೂ ಯಶಸ್ಸು ಸಾಧಿಸಲು ಅಗತ್ಯವಾದ ಮಾರ್ಗದರ್ಶನವನ್ನು ನೀಡುತ್ತಿದೆ. ಅಲ್ಲದೇ  ಪಿಯುಸಿ ಪಠ್ಯಕ್ರಮದೊಂದಿಗೆ JEE ,KCET, NDA ಹಾಗೂ NEET ಸೇರಿದಂತೆ ಹಲವಾರು ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ಸವಾಲುಗಳಿಗೆ ಸಜ್ಜುಗೊಳಿಸಲಾಗುತ್ತಿದೆ ಎಂದು ಪೋಷಕರನ್ನು ಉದ್ದೇಶಿಸಿ ಮಾತುಗಳನ್ನಾಡಿದರು.
ಪಿಯು ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯ ಸಮನ್ವಯವೇ ಕ್ರಿಯೇಟಿವ್‌ ಕಾಲೇಜಿನ ಶೈಕ್ಷಣಿಕ ದೃಷ್ಟಿಕೋನದ ಪ್ರಮುಖ ಅಂಶವಾಗಿದೆ. ಪಿಯುಸಿ ಪಠ್ಯಕ್ರಮದ ಪರಿಕಲ್ಪನೆಗಳನ್ನು ಆಳವಾಗಿ ಅರ್ಥಮಾಡಿಕೊಳ್ಳುವುದರ ಜೊತೆಗೆ, ಅಗತ್ಯವಾದ ಪರಿಕಲ್ಪನಾತ್ಮಕ ಸ್ಪಷ್ಟತೆ, ಸಮಸ್ಯೆ ಪರಿಹರಿಸುವ ಕೌಶಲ್ಯ, ಹಾಗೂ ಪರೀಕ್ಷಾ ತಂತ್ರಗಳನ್ನು ಬೆಳೆಸುವತ್ತ  ವಿಶೇಷ ಗಮನ ಹರಿಸಲಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ತಕ್ಕ ಉನ್ನತ ಶಿಕ್ಷಣದ ಆಯ್ಕೆಗಳನ್ನು ಗುರುತಿಸಿಕೊಂಡು, ಗುರಿ ಸಾಧನೆಯತ್ತ ಆತ್ಮವಿಶ್ವಾಸದಿಂದ ಹೆಜ್ಜೆ ಇಡುವಂತೆ ಇಲ್ಲಿ  ಪ್ರೋತ್ಸಾಹಿಸಲಾಗುತ್ತಿದೆ ಎಂದು ತಿಳಿಸಿದರು.
 ವೇದಿಕೆಯಲ್ಲಿ ಆಂಗ್ಲ ಭಾಷೆ ಉಪನ್ಯಾಸಕರಾದ ಶ್ರೀ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.
    ಕಾರ್ಯಕ್ರಮವನ್ನು ಡಾ. ಪ್ರಜ್ವಲ್ ನಡೆಸಿಕೊಟ್ಟರು, ಭೋದಕ-ಬೋಧಕೇತರ ಸಿಬ್ಬಂದಿಗಳು ಹಾಗೂ  ಪೋಷಕ ವರ್ಗದವರು ಉಪಸ್ಥಿತರಿದ್ದರು.
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page