29 C
Udupi
Monday, October 19, 2026
spot_img
spot_img
HomeBlogಬೆಂಗಳೂರು: ಪಡಿತರ ಚೀಟಿದಾರರ ಇ-ಕೆವೈಸಿ ಗಡುವು ನ. 10ರವರೆಗೆ ವಿಸ್ತರಣೆ

ಬೆಂಗಳೂರು: ಪಡಿತರ ಚೀಟಿದಾರರ ಇ-ಕೆವೈಸಿ ಗಡುವು ನ. 10ರವರೆಗೆ ವಿಸ್ತರಣೆ

ವರ್ಷದ ಹಿಂದೆಯೇ ಇ-ಕೆವೈಸಿ ಮಾಡಿದವರಿಗೂ ಮತ್ತೆ ಇ-ಕೆವೈಸಿ ಮಾಡಿಸುವುದು ಕಡ್ಡಾಯ!

ಬೆಂಗಳೂರು: ಪಡಿತರ ಚೀಟಿದಾರರು ಇ-ಕೆವೈಸಿ ದೃಢೀಕರಿಸಲು ನೀಡಿದ್ದ ಗಡುವನ್ನು ಆಹಾರ ಇಲಾಖೆ ನವೆಂಬರ್ 10ರವರೆಗೆ ವಿಸ್ತರಿಸಿದೆ. ಈ ಹಿಂದೆ ಅಕ್ಟೋಬರ್ 20 ಕೊನೆಯ ದಿನವಾಗಿತ್ತು.

ಒಂದು ವರ್ಷಕ್ಕೂ ಹಿಂದೆ ಇ-ಕೆವೈಸಿ ಮಾಡಿಸಿದ 1,15,87,298 ಫಲಾನುಭವಿಗಳು ಮತ್ತೊಮ್ಮೆ ದೃಢೀಕರಣ ಮಾಡಿಸಬೇಕಿರುವುದರಿಂದ ಗಡುವು ವಿಸ್ತರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಈವರೆಗೆ ಇ-ಕೆವೈಸಿ ಮಾಡಿಸದ 3,82,362 ಫಲಾನುಭವಿಗಳು ಹಾಗೂ ಐದು ವರ್ಷಕ್ಕೂ ಹಿಂದೆ ಇ-ಕೆವೈಸಿ ಮಾಡಿಸಿದ 54,27,396 ಮಂದಿ ಇನ್ನೂ ದೃಢೀಕರಣ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ.

ಫಲಾನುಭವಿಗಳು ‘ಅನ್ನ ಸೇವೆ’ ಮೊಬೈಲ್ ಆ್ಯಪ್ ಅಥವಾ ನ್ಯಾಯಬೆಲೆ ಅಂಗಡಿಗಳಲ್ಲಿನ ‘AHARA’ ತಂತ್ರಾಂಶದ ಮೂಲಕ ನವೆಂಬರ್ 10ರೊಳಗೆ ಇ-ಕೆವೈಸಿ ಮಾಡಿಸಬೇಕು. ಇಲ್ಲದಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಹೊರ ರಾಜ್ಯಗಳಲ್ಲೂ ‘ಅನ್ನ ಸೇವೆ’ ಆ್ಯಪ್ ಲಭ್ಯ

ಹೊರ ರಾಜ್ಯಗಳಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಪಡಿತರ ಚೀಟಿದಾರರ ಅನುಕೂಲಕ್ಕಾಗಿ ‘ಅನ್ನ ಸೇವೆ’ ಆ್ಯಪ್ ಅನ್ನು ದೇಶಾದ್ಯಂತ ಲಭ್ಯವಾಗುವಂತೆ ಮಾಡಲಾಗಿದೆ. ಫಲಾನುಭವಿಗಳು ತಾವು ಇರುವ ಸ್ಥಳದಿಂದಲೇ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಇ-ಕೆವೈಸಿ ಪೂರ್ಣಗೊಳಿಸಬಹುದು.

ಆ್ಯಪ್‌ನ ಅಪ್ಡೇಟ್ ಕೂಡ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದ್ದು, ಈಗಾಗಲೇ ಡೌನ್‌ಲೋಡ್ ಮಾಡಿಕೊಂಡಿರುವವರು ಅದನ್ನು ಅಪ್‌ಡೇಟ್ ಮಾಡಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page