
ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 23 ಮತ್ತು 24ರಂದು ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ,ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಅಕ್ಟೋಬರ್ 24ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ.
ಗದಗ ಹಾವೇರಿ ರಾಯಚೂರು, ಕೊಪ್ಪಳ ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.






















