
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಮಳೆಯ ವಾತಾವರಣವಿರಲಿದ್ದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಧಾರವಾಡ, ಗದಗ ,ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಳಗಾವಿ ,ಬೀದರ್, ಕಲಬುರಗಿ ,ಕೊಪ್ಪಳ ,ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.






















