33.6 C
Udupi
Monday, October 26, 2026
spot_img
spot_img
HomeBlogಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಯೋಗ ಶಿಕ್ಷಕಿ "ಶಿಲ್ಪಾ ಶೆಟ್ಟಿಯವರಿಗೆ ರಾಷ್ಟ್ರೀಯ ಯೋಗ ರತ್ನ...

ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಯೋಗ ಶಿಕ್ಷಕಿ “ಶಿಲ್ಪಾ ಶೆಟ್ಟಿಯವರಿಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ”

ಕಾರ್ಕಳ: ಜೇಸಿ ಇಂಟರ್‌ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳದ ಯೋಗ ಶಿಕ್ಷಕಿಯಾದ ಶ್ರೀಮತಿ ಶಿಲ್ಪಾ ಶೆಟ್ಟಿಯವರು ತಮ್ಮ ಯೋಗ ಕ್ಷೇತ್ರದ ಸಾಧನೆಗಾಗಿ ಪ್ರತಿಷ್ಠಿತ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರೋಟರಿ ಬೆಂಗಳೂರು ಗ್ಲೋಬಲ್ ಯೋಗ ವತಿಯಿಂದ ಬೆಂಗಳೂರಿನ ಜೆ.ಸಿ. ರಸ್ತೆಯ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಆಯೋಜಿಸಲಾದ ‘ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ 2025-26’ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಶಿಕ್ಷಕರ ದಿನಾಚರಣೆಯ ಅಂಗವಾಗಿ ಭಾರತದ ಸಮರ್ಪಿತ ಯೋಗ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಬೃಹತ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಯೋಗ ಕ್ಷೇತ್ರದಲ್ಲಿ ಶ್ರೀಮತಿ ಶಿಲ್ಪಾ ಶೆಟ್ಟಿಯವರ ಸಾಧನೆಯನ್ನು ಗುರುತಿಸಿ ಅವರಿಗೆ ಈ ಗೌರವವನ್ನು ನೀಡಿ ಸನ್ಮಾನಿಸಲಾಯಿತು.

ಶಿಲ್ಪಾ ಶೆಟ್ಟಿಯವರ ಈ ಸಾಧನೆಗೆ ಶಾಲಾ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಶಾಲಾ ಆಡಳಿತಾಧಿಕಾರಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page