
ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು ಅಕ್ಟೋಬರ್ 27, 28ರಂದು ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 27ರಂದು ದಕ್ಷಿಣ ಕನ್ನಡ ,ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು ,ಉತ್ತರ ಒಳನಾಡಿನ ಬಾಗಲಕೋಟೆ ,ಬೆಳಗಾವಿ, ಬೀದರ್, ರಾಯಚೂರು, ಕಲಬುರಗಿ, ಕೊಪ್ಪಳ ,ಯಾದಗಿರಿ ಜಿಲ್ಲೆಗಳನ್ನು ಒಣಹಾವೆ ಮುಂದುವರೆಯಲಿದೆ. ಅಕ್ಟೋಬರ್ 28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.






















