25.8 C
Udupi
Thursday, October 29, 2026
spot_img
spot_img
HomeBlogರೈಲುಗಳಲ್ಲಿ ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್ ಚಾರ್ಜಿಂಗ್ ನಿಷೇಧ...!

ರೈಲುಗಳಲ್ಲಿ ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್ ಚಾರ್ಜಿಂಗ್ ನಿಷೇಧ…!

ಇತ್ತೀಚಿನ ಪವರ್ ಬ್ಯಾಂಕ್ ಸ್ಫೋಟದ ಘಟನೆ ಬಳಿಕ ಕಠಿಣ ನಿರ್ಧಾರ ಕೈಗೊಂಡ ರೈಲ್ವೆ ಮಂಡಳಿ

ನವದೆಹಲಿ: ಮುಂಬೈ ಲೋಕಲ್ ರೈಲಿನಲ್ಲಿ ಚಾರ್ಜ್ ಮಾಡುತ್ತಿದ್ದ ಪವರ್ ಬ್ಯಾಂಕ್ ಸ್ಫೋಟಗೊಂಡು ಬೋಗಿಯೆಲ್ಲ ಹೊಗೆಯಿಂದ ಆವೃತವಾದ ಘಟನೆ ಬಳಿಕ ರೈಲ್ವೆ ಮಂಡಳಿ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಿದೆ. ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ರೈಲುಗಳಲ್ಲಿನ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸುವಂತೆ ಎಲ್ಲ ರೈಲ್ವೆ ವಲಯಗಳಿಗೆ ಸೂಚಿಸಲಾಗಿದೆ.

ಅಕ್ಟೋಬರ್ 26ರಂದು ಹೊರಡಿಸಿದ ಸುತ್ತೋಲೆಯಲ್ಲಿ, ನಿಗದಿತ ಸಮಯದಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ವಿಚ್ ಆಫ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಯಮ ಪಾಲನೆಯಲ್ಲಿ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.

ಆಕಸ್ಮಿಕ ತಪಾಸಣೆಗೆ ಸೂಚನೆ:

ರಾತ್ರಿ ವೇಳೆ ಚಾರ್ಜಿಂಗ್ ಪಾಯಿಂಟ್‌ಗಳು ಸ್ಥಗಿತಗೊಂಡಿರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಆಕಸ್ಮಿಕ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ. ಸಿಬ್ಬಂದಿಗೆ ಸೂಕ್ತ ತರಬೇತಿ ನೀಡುವುದರ ಜೊತೆಗೆ ಸುರಕ್ಷತಾ ನಿಯಮಗಳ ಪಾಲನೆಯಲ್ಲಿ ನಿರ್ಲಕ್ಷ್ಯ ತೋರದಂತೆ ಎಚ್ಚರಿಕೆ ನೀಡಲಾಗಿದೆ.

ರೈಲುಗಳಲ್ಲಿ ರಾತ್ರಿ ಚಾರ್ಜಿಂಗ್ ನಿರ್ಬಂಧಿಸುವ ನಿಯಮ ಹೊಸದಲ್ಲ. 2014ರ ಜೂನ್ 19ರಂದು ಬೆಂಗಳೂರು–ಹಜೂರ್ ಸಾಹಿಬ್ ನಾಂದೇಡ್ ಎಕ್ಸ್‌ಪ್ರೆಸ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಬಳಿಕ ರೈಲ್ವೆ ಸುರಕ್ಷತಾ ಆಯುಕ್ತರ ಶಿಫಾರಸಿನಂತೆ ಈ ಕ್ರಮ ಜಾರಿಗೆ ತರಲಾಗಿತ್ತು. 2021ರ ಮಾರ್ಚ್‌ನಲ್ಲಿಯೂ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿತ್ತು.

ಇತ್ತೀಚಿನ ಪವರ್ ಬ್ಯಾಂಕ್ ಸ್ಫೋಟದ ಘಟನೆ ಹಿನ್ನೆಲೆಯಲ್ಲಿ ರೈಲ್ವೆ ಮಂಡಳಿ ಮತ್ತೆ ಈ ನಿಯಮವನ್ನು ನೆನಪಿಸಿದೆ. ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಚಾರ್ಜಿಂಗ್ ಸೌಲಭ್ಯ ಇರುವುದಿಲ್ಲವಾದ್ದರಿಂದ, ಪ್ರಯಾಣಿಕರು ಪ್ರಯಾಣಕ್ಕೂ ಮುನ್ನ ಮೊಬೈಲ್ ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಚಾರ್ಜ್ ಮಾಡಿಕೊಳ್ಳುವಂತೆ ಸಲಹೆ ನೀಡಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page