
ಮೈಸೂರು: ಕೆಟ್ಟ ಕೆಲಸಗಳನ್ನು ಮಾಡಿ ಪೂಜೆ ಸಲ್ಲಿಸಿದರೆ ದೇವರು ಒಳ್ಳೆಯದನ್ನು ಮಾಡುವುದಿಲ್ಲ. ಬೇರೆಯವರಿಗೆ ಕೆಡುಕು ಬಯಸದೆ ಪೂಜೆ ಮಾಡಿದಾಗ ಮಾತ್ರ ಒಳ್ಳೆಯದಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಮಿಕವಾಗಿ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವರು ಇದ್ದಾನೆ, ಇಲ್ಲ ಎಂದು ತಾನು ಎಂದಿಗೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ, ತಾನು ಎಂಟು ವರ್ಷ ಮುಖ್ಯಮಂತ್ರಿಯಾಗಿ 17 ಬಜೆಟ್ಗಳನ್ನು ಮಂಡಿಸಿದ್ದು, ಇದು ರಾಜ್ಯದಲ್ಲೇ ದಾಖಲೆಯಾಗಿದೆ. ಇನ್ನು ಮುಂದೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ ಸಿದ್ದರಾಮಯ್ಯ ತಿಳಿಸಿದರು.
























