31.4 C
Udupi
Thursday, October 29, 2026
spot_img
spot_img
HomeBlogಎಕ್ಸ್‌ಪ್ರೆಸ್‌ ವೇ ಗಳಲ್ಲಿ 120 ಕಿ.ಮೀ ವೇಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ದಂಡ ವಿಧಿಸದಂತೆ ಸೂಚನೆ...

ಎಕ್ಸ್‌ಪ್ರೆಸ್‌ ವೇ ಗಳಲ್ಲಿ 120 ಕಿ.ಮೀ ವೇಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ದಂಡ ವಿಧಿಸದಂತೆ ಸೂಚನೆ ನೀಡಿದ ಕೇಂದ್ರ ಸಚಿವ ಗಡ್ಕರಿ

ನವದೆಹಲಿ: ಎಕ್ಸ್‌ಪ್ರೆಸ್‌ವೇಗಳಲ್ಲಿ ವೇಗವಾಗಿ ವಾಹನ ಚಲಾಯಿಸುವವರಿಗೆ ಸಂಬಂಧಿಸಿದಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಹತ್ವದ ಸೂಚನೆ ನೀಡಿದ್ದಾರೆ. ನಿಗದಿತ ವೇಗದ ಮಿತಿಗಿಂತ ಶೇ. 20ರಷ್ಟು ಹೆಚ್ಚುವರಿ ವೇಗದಲ್ಲಿ ಸಂಚರಿಸಿದರೆ ದಂಡ ವಿಧಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ, ಹೆದ್ದಾರಿಗಳಲ್ಲಿ ಗಂಟೆಗೆ 120 ಕಿ.ಮೀ. ವೇಗದವರೆಗೆ ಸಂಚರಿಸುವ ವಾಹನಗಳಿಗೆ ನೋಟಿಸ್ ಕಳುಹಿಸಬಾರದು ಎಂದು ಸ್ಪಷ್ಟಪಡಿಸಿದರು. ನಿಗದಿತ ಮಿತಿಗಿಂತ ಶೇ. 20ರಷ್ಟು ವೇಗ ಹೆಚ್ಚಿದ್ದರೂ ರಿಯಾಯಿತಿ ನೀಡಬೇಕು. ಅದಕ್ಕಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವವರಿಗೆ ಮಾತ್ರ ಚಲನ್ ಜಾರಿಗೊಳಿಸಬೇಕು ಎಂದರು.

ಇದೇ ವೇಳೆ, ಹೆದ್ದಾರಿಗಳಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ತಡೆಯಲು ಕೃತಕ ಬುದ್ಧಿಮತ್ತೆ (AI) ಆಧಾರಿತ ಸುಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆ (ATMS) ಅಳವಡಿಸಿಕೊಳ್ಳಲು ಕೈಗಾರಿಕಾ ವಲಯದ ಸಹಕಾರವನ್ನು ಕೋರಿದರು. ಈ ತಂತ್ರಜ್ಞಾನವು ಲೇನ್ ನಿಯಮ ಉಲ್ಲಂಘನೆಗಳನ್ನು ಪತ್ತೆಹಚ್ಚಲು ಹಾಗೂ ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page