
ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವಂಬರ್ ಒಂದರಿಂದ ಮೂರರವರೆಗೆ ಬಿರುಗಾಳಿ ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಮೈಸೂರು ಮಂಡ್ಯ ಹಾಸನ ಕೊಡಗು ಬೆಂಗಳೂರು ಸೇರಿದಂತೆ ಸಾಧಾರಣ ಮಳೆ ಯಾಗಲಿದೆ.
ನವಂಬರ್ ಮೂರರಿಂದ ಐದರವರೆಗೆ ರಾಜ್ಯದ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರೆಯಲಿದೆ.
























