29.5 C
Udupi
Saturday, October 31, 2026
spot_img
spot_img
HomeBlogನಂದಿನಿ ಹಾಲು, ಮೊಸರು ದರ ಏರಿಕೆ: ನ.1ರಿಂದಲೇ ಹೊಸ ದರ ಜಾರಿ...!

ನಂದಿನಿ ಹಾಲು, ಮೊಸರು ದರ ಏರಿಕೆ: ನ.1ರಿಂದಲೇ ಹೊಸ ದರ ಜಾರಿ…!

ಬೆಂಗಳೂರು: ರಾಜ್ಯದ ಜನತೆಗೆ ಹಾಲಿನ ದರ ಏರಿಕೆಯ ಬೆನ್ನಲ್ಲೇ ಮೊಸರು ಸೇರಿದಂತೆ ನಂದಿನಿ ಉತ್ಪನ್ನಗಳ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಹಾಲು ಮತ್ತು ಮೊಸರಿನ ಪರಿಷ್ಕೃತ ಮಾರಾಟ ದರವನ್ನು ಪ್ರಕಟಿಸಿದ್ದು, ನವೆಂಬರ್ 1ರಿಂದಲೇ ಹೊಸ ದರಗಳು ಜಾರಿಗೆ ಬರಲಿವೆ.

ಪರಿಷ್ಕೃತ ದರದಂತೆ, ಅರ್ಧ ಲೀಟರ್ ಮೊಸರಿನ ಬೆಲೆ 28 ರೂ.ನಿಂದ 34 ರೂ.ಗೆ ಏರಿಕೆಯಾಗಿದೆ. ಅದೇ ರೀತಿ, ಒಂದು ಲೀಟರ್ ಮೊಸರಿನ ದರ 54 ರೂ.ನಿಂದ 68 ರೂ.ಗೆ ಹೆಚ್ಚಳವಾಗಿದೆ. ಇದರಿಂದ ಕ್ರಮವಾಗಿ 6 ರೂ. ಮತ್ತು 14 ರೂ. ಹೆಚ್ಚುವರಿ ಹಣ ನೀಡಬೇಕಾಗಿದೆ.

ಹಾಲಿನ ವಿವಿಧ ಮಾದರಿಗಳ ದರವನ್ನೂ ಹೆಚ್ಚಿಸಲಾಗಿದೆ. ಟೋನ್ಡ್ ಹಾಲಿನ ಬೆಲೆ 46 ರೂ.ನಿಂದ 54 ರೂ.ಗೆ ಹಾಗೂ ಹೋಮೋಜಿನೈಸ್ಡ್ ಟೋನ್ಡ್ ಹಾಲಿನ ದರ 47 ರೂ.ನಿಂದ 56 ರೂ.ಗೆ ಏರಿಕೆಯಾಗಿದೆ.

ಇನ್ನು ಹೋಮೋಜಿನೈಸ್ಡ್ ಹಸುವಿನ ಹಾಲಿನ ಬೆಲೆ 50 ರೂ.ನಿಂದ 58 ರೂ.ಗೆ ಹೆಚ್ಚಳವಾಗಿದೆ. ಸ್ಪೆಷಲ್ ಟೋನ್ಡ್ ಮತ್ತು ಶುಭಂ ಹಾಲಿನ ದರ ತಲಾ 52 ರೂ.ನಿಂದ 64 ರೂ.ಗೆ ಏರಿಕೆಯಾಗಿದ್ದು, ಹೋಮೋಜಿನೈಸ್ಡ್ ಶುಭಂ ಹಾಲಿನ ಬೆಲೆ 53 ರೂ.ನಿಂದ 65 ರೂ.ಗೆ ತಲುಪಿದೆ.

ಕಳೆದ ಐದು ದಶಕಗಳಿಂದ ‘ರೈತರಿಂದ, ರೈತರಿಗಾಗಿ ಮತ್ತು ರೈತರಿಗೋಸ್ಕರ’ ಎಂಬ ಸಹಕಾರ ತತ್ವದಡಿ ಕೆಎಂಎಫ್ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಸುಮಾರು 26.89 ಲಕ್ಷ ಹೈನುಗಾರ ರೈತರು ಇದರ ಸದಸ್ಯರಾಗಿದ್ದು, ಅವರಲ್ಲಿ 8.9 ಲಕ್ಷ ರೈತರು ಪ್ರತಿದಿನ ಹಾಲು ಪೂರೈಸುತ್ತಿದ್ದಾರೆ. ಹಾಲು ಉತ್ಪಾದಕರಿಗೆ ದಿನವೊಂದಕ್ಕೆ ಸರಾಸರಿ 28.60 ಕೋಟಿ ರೂ. ಪಾವತಿಸಲಾಗುತ್ತಿದೆ ಎಂದು ಮಂಡಳಿ ತಿಳಿಸಿದೆ.

ಈ ವರ್ಷ ಸಮರ್ಪಕ ಮಳೆಯಾಗದೆ ನೀರು ಮತ್ತು ಮೇವಿನ ಕೊರತೆ ಎದುರಾಗಿದೆ. ಇದರಿಂದ ಪಶುಗಳ ನಿರ್ವಹಣೆ, ಔಷಧೋಪಚಾರ ಹಾಗೂ ಮೇವು ಖರೀದಿಗೆ ರೈತರು ಹೆಚ್ಚಿನ ವೆಚ್ಚ ಭರಿಸುವಂತಾಗಿದೆ. ಹೀಗಾಗಿ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10ರಿಂದ 12 ರೂ. ಹೆಚ್ಚಿಸುವಂತೆ ಕೆಎಂಎಫ್ ಸರ್ಕಾರಕ್ಕೆ ಮನವಿ ಮಾಡಿತ್ತು.

ಹೈನುಗಾರ ರೈತರ ಆರ್ಥಿಕ ಹಿತಾಸಕ್ತಿ ಮತ್ತು ಕ್ಷೇತ್ರದ ಸುಸ್ಥಿರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಸಭೆಯಲ್ಲಿ ದರ ಪರಿಷ್ಕರಣೆ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ನಂದಿನಿ ಟೋನ್ಡ್ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್‌ಗೆ 8 ರೂ. ಹೆಚ್ಚಿಸಿ, ಅದರಲ್ಲಿ 7 ರೂ.ಗಳನ್ನು ಹಾಲು ಉತ್ಪಾದಕರಿಗೆ ವರ್ಗಾಯಿಸಲು ಸೂಚಿಸಲಾಗಿದೆ ಎಂದು ಕೆಎಂಎಫ್ ತಿಳಿಸಿದೆ.

ಇದರೊಂದಿಗೆ ಹಾಲಿನಲ್ಲಿರುವ ಜಿಡ್ಡಿನಾಂಶದ (ಫ್ಯಾಟ್) ಪ್ರಮಾಣವನ್ನು ಆಧರಿಸಿ ನಂದಿನಿಯ ಎಲ್ಲ ಮಾದರಿಯ ಹಾಲು ಮತ್ತು ಮೊಸರಿನ ಮಾರಾಟ ದರಗಳನ್ನು ನವೆಂಬರ್ 1ರಿಂದ ಅನ್ವಯವಾಗುವಂತೆ ಪರಿಷ್ಕರಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page