
ರಾಜ್ಯದ ಹಲವೆಡೆ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯ ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ನವಂಬರ್ ಒಂದರಿಂದ ಐದರವರೆಗೆ ಭಾರಿ ಮಳೆಯಾಗಲಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ, ಬೆಳಗಾವಿ, ಧಾರವಾಡ, ಗದಗ ,ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ.
























