27.1 C
Udupi
Sunday, November 1, 2026
spot_img
spot_img
HomeBlog'ಕಬ್ಬು ಬೆಳೆಗಾರರ ಹಿತಕ್ಕಾಗಿ ಸಕ್ಕರೆ MSP ಕೆ.ಜಿ.ಗೆ 50 ರೂ.ಗೆ ಹೆಚ್ಚಿಸಿ': ಕೇಂದ್ರ ಸರ್ಕಾರಕ್ಕೆ ಸಿಎಂ...

‘ಕಬ್ಬು ಬೆಳೆಗಾರರ ಹಿತಕ್ಕಾಗಿ ಸಕ್ಕರೆ MSP ಕೆ.ಜಿ.ಗೆ 50 ರೂ.ಗೆ ಹೆಚ್ಚಿಸಿ’: ಕೇಂದ್ರ ಸರ್ಕಾರಕ್ಕೆ ಸಿಎಂ ಡಿಕೆಶಿ ಮನವಿ

ಬೆಂಗಳೂರು: ಸದಾಶಿವನಗರದ ನಿವಾಸದ ಬಳಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು (MSP) ಕೆ.ಜಿ.ಗೆ 50 ರೂ.ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರ ಬೆಲೆ ಹೆಚ್ಚಿಸಿದರೆ ಮಾತ್ರ ಕಾರ್ಖಾನೆಗಳಿಂದ ರೈತರಿಗೆ ಉತ್ತಮ ದರ ಕೊಡಿಸಲು ಸಾಧ್ಯ ಎಂದು ಅವರು ತಿಳಿಸಿದ್ದಾರೆ.

ರೈತರು ಪ್ರತಿಭಟನೆ ಕೈಬಿಟ್ಟು ಈ ಹಿಂದೆ ನಡೆದ ಮಾತುಕತೆಯ ನಿರ್ಧಾರಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ ಅವರು ಕೇಂದ್ರ ಸರ್ಕಾರ ಬೆಲೆ ಹೆಚ್ಚಿಸಿದ ಬಳಿಕ ಕಾರ್ಖಾನೆಗಳಿಂದ ರೈತರಿಗೆ ಸೂಕ್ತ ಹಣ ಕೊಡಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದೆ. ಈ ಸಂಬಂಧ ಪ್ರಧಾನಿಗೆ ಪತ್ರ ಬರೆದಿದ್ದು, ಕೇಂದ್ರ ಸಚಿವರನ್ನೂ ಭೇಟಿಯಾಗಿ ರೈತರ ಪರವಾಗಿ ಮನವಿ ಮಾಡುತ್ತೇನೆ ಎಂದರು.

ಕಬ್ಬು ಒಣಗಿದರೆ ರಸದ ಪ್ರಮಾಣ ಕಡಿಮೆಯಾಗುವುದರಿಂದ ರೈತರಿಗೆ ಮತ್ತಷ್ಟು ನಷ್ಟವಾಗಲಿದೆ. ಹೀಗಾಗಿ ಪ್ರತಿಭಟನೆ ನಿಲ್ಲಿಸಿ, ಕಾರ್ಖಾನೆಗಳು ಕಬ್ಬು ಅರೆಯಲು ಅವಕಾಶ ನೀಡಬೇಕು. ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಮನವಿ ಮಾಡಿದ ಅವರು, ಕಬ್ಬು ಅರೆಯಲು ಇದು ಸೂಕ್ತ ಸಮಯವಾಗಿದ್ದು, ರೈತರಿಗೆ ಯಾವುದೇ ತೊಂದರೆಯಾಗಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

ಈ ಹಿಂದೆ ಕಬ್ಬು ಬೆಳೆಗಾರರು, ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಸಮ್ಮುಖದಲ್ಲಿ ಪ್ರಾಮಾಣಿಕವಾಗಿ ಮಾತುಕತೆ ನಡೆಸಲಾಗಿದೆ. ಕೇಂದ್ರ ಸರ್ಕಾರ ಸೂಕ್ತ ಬೆಲೆ ನಿಗದಿಪಡಿಸುವುದಾಗಿ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದರು. ಕೇಂದ್ರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂಬ ವಿಚಾರವನ್ನೂ ಚರ್ಚಿಸಲಾಗಿತ್ತು. ಅಲ್ಲದೆ, ಕೇಂದ್ರ ಸರ್ಕಾರ ನೇಮಿಸಿದ್ದ ಸಮಿತಿಯ ಸದಸ್ಯರ ಗಮನಕ್ಕೂ ಈ ವಿಷಯವನ್ನು ತರಲಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page