
ಮುಂದಿನ ಕೆಲವು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನ. 2 ರಿಂದ 5 ರವರೆಗೆ ರಾಜ್ಯದಲ್ಲಿ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉಡುಪಿ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ರಾಯಚೂರು, ಕಲಬುರಗಿ ,ಬೀದರ್ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆ ಇರಲಿದೆ.
ಬೆಂಗಳೂರು ನಗರ ,ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
























