
ಕಾರ್ಕಳ: 2026–27ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜುಗಳಲ್ಲಿ ಖಾಲಿ ಉಳಿದಿರುವ ಬಿ.ಎಸ್ಸಿ. ನರ್ಸಿಂಗ್ ಕೋರ್ಸ್ನ ಸೀಟುಗಳನ್ನು ಭರ್ತಿ ಮಾಡಲು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ, ಕರ್ನಾಟಕ ಸರ್ಕಾರ, ಬೆಂಗಳೂರು ಇವರ ನಿರ್ದೇಶನದಂತೆ ಸರ್ಕಾರಿ ನರ್ಸಿಂಗ್ ಕಾಲೇಜು, ಕಾರ್ಕಳದಲ್ಲಿ ದಿನಾಂಕ 30-10-2026ರಂದು ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ನೇರ ಪ್ರವೇಶಾತಿ (Walk-in Admission) ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET)ಯಲ್ಲಿ ಅರ್ಹತೆ ಪಡೆದಿರುವ ಹಾಗೂ ಬಿ.ಎಸ್ಸಿ. ನರ್ಸಿಂಗ್ ಪ್ರವೇಶಕ್ಕೆ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಪ್ರವೇಶಾತಿಯನ್ನು ಅಭ್ಯರ್ಥಿಗಳ CET ಮೆರಿಟ್ ಸಂಖ್ಯೆ (Merit Number), ಅರ್ಹತೆ ಹಾಗೂ ಲಭ್ಯವಿರುವ ಸೀಟುಗಳ ಆಧಾರದ ಮೇಲೆ ನಿಯಮಾನುಸಾರ ನಡೆಸಲಾಗುವುದು.ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದಂದು ಅಗತ್ಯ ಮೂಲ ದಾಖಲೆಗಳು ಮತ್ತು ಅವುಗಳ ಪ್ರತಿಗಳೊಂದಿಗೆ ಸರ್ಕಾರಿ ನರ್ಸಿಂಗ್ ಕಾಲೇಜು, ಕಾರ್ಕಳಕ್ಕೆ ಖುದ್ದಾಗಿ ಹಾಜರಾಗಬೇಕು. ಪ್ರವೇಶಾತಿಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವು ನಿಗದಿಪಡಿಸಿರುವ ನಿಯಮಗಳು ಹಾಗೂ ಮಾರ್ಗಸೂಚಿಗಳು ಅನ್ವಯವಾಗುತ್ತವೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸರ್ಕಾರಿ ನರ್ಸಿಂಗ್ ಕಾಲೇಜು, ಕಾರ್ಕಳದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ನರ್ಸಿಂಗ್ ಕಾಲೇಜು,ಕಾರ್ಕಳದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
























