
ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಐ. ಕ್ರಿಸ್ಟೋಫರ್ ಕೋಟ್ಯಾನ್ ಅವರು ಮಾತನಾಡಿ, “ಹಲವಾರು ಜಾತಿ, ಧರ್ಮ, ಪಂಗಡಗಳ ಜನರು ಕರ್ನಾಟಕದಲ್ಲಿ ವಾಸ ಮಾಡುತ್ತಿದ್ದರೂ ಕೂಡಾ ನಾವೆಲ್ಲರೂ ಒಂದೇ ಎಂಬ ಭಾವನೆ ನಮ್ಮಲ್ಲಿದ್ದು, ಪರಸ್ಪರ ಕೋಮು ಸೌಹಾರ್ದತೆಯಿಂದ ಬದುಕುತ್ತಿದ್ದೇವೆ. ಇದೇ ನಮ್ಮ ನಾಡಿನ ವಿಶೇಷತೆಯಾಗಿದೆ” ಎಂದು ಹೇಳಿದರು.
ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜೋಸ್ನಾ ಸ್ನೇಹಲತಾ ಹಾಗೂ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜಾಲಿ ಜೇಕಬ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಸ್ಥೆಯ ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕಿ ಶ್ರೀಮತಿ ರೇಖಾ ಸಂತೋಷ್ ಕಾರ್ಯಕ್ರಮ ನಿರ್ವಹಿಸಿದರು.

























