
ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಹಾಸನ, ಚಿಕ್ಕಮಗಳೂರು ,ಶಿವಮೊಗ್ಗ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ,ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೊಪ್ಪಳ,ರಾಯಚೂರು, ವಿಜಯಪುರ,ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

























