31 C
Udupi
Thursday, November 5, 2026
spot_img
spot_img
HomeBlogಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕಾರ್ಕಳದಲ್ಲೂ ಹಕ್ಕೊತ್ತಾಯ ಸಭೆ,

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕಾರ್ಕಳದಲ್ಲೂ ಹಕ್ಕೊತ್ತಾಯ ಸಭೆ,

ನ. 14ರಂದು ತಾಲೂಕು ಮಟ್ಟದ ಸಭೆ ಆಯೋಜನೆ

ಕಾರ್ಕಳ: ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟವನ್ನು ತಾಲೂಕು ಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಉಡುಪಿ ಜಿಲ್ಲೆಯ ಕರೆಯ ಮೇರೆಗೆ ಕಾರ್ಕಳ ವಕೀಲರ ಸಂಘದ ನೇತೃತ್ವದಲ್ಲಿ ನ.14ರಂದು ಕಾರ್ಕಳ ತಾಲೂಕು ಹಕ್ಕೊತ್ತಾಯ ಸಭೆ ಆಯೋಜಿಸಲು ನಿರ್ಧರಿಸಲಾಗಿದೆ.

ಈ ಕುರಿತು ಕಾರ್ಕಳ ವಕೀಲರ ಸಂಘದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ ಹಾಗೂ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ, ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಈಗಾಗಲೇ ಉಡುಪಿ ಜಿಲ್ಲಾ ಮಟ್ಟದಲ್ಲಿ ವಿವಿಧ ಸಂಘ-ಸಂಸ್ಥೆಗಳ ಹಕ್ಕೊತ್ತಾಯ ಸಭೆ ನಡೆಸಲಾಗಿದೆ. ಕಳೆದ ಎರಡು ಮೂರು ತಿಂಗಳಿನಿಂದ ಕುಂದಾಪುರ, ಬೈಂದೂರು ಹಾಗೂ ಬ್ರಹ್ಮಾವರ ತಾಲೂಕುಗಳಲ್ಲಿಯೂ ಸಭೆಗಳನ್ನು ಆಯೋಜಿಸುವ ಮೂಲಕ ಜನಜಾಗೃತಿ ಮೂಡಿಸಲಾಗಿದೆ ಎಂದರು.

ಸೆ.29ರಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಈ ಬೇಡಿಕೆಯ ಪರಿಶೀಲನೆಗಾಗಿ ತ್ರಿಸದಸ್ಯ ನ್ಯಾಯಮೂರ್ತಿಗಳ ಸಮಿತಿ ರಚಿಸಿರುವುದು ಹೋರಾಟದ ಮೊದಲ ಯಶಸ್ಸಿನ ಹೆಜ್ಜೆಯಾಗಿದೆ. ಇದೀಗ ಕಾರ್ಕಳದಲ್ಲಿಯೂ ವಕೀಲರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ಒಳಗೊಂಡಂತೆ ಹಕ್ಕೊತ್ತಾಯ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ನ.14ರಂದು ಶನಿವಾರ ಮಧ್ಯಾಹ್ನ 3.30ಕ್ಕೆ ಕಾರ್ಕಳ ಅನಂತಶಯನದ ಬಳಿಯ ಹೋಟೆಲ್ ಪ್ರಕಾಶ್ ಸಭಾಂಗಣದಲ್ಲಿ ಸಭೆ ನಡೆಯಲಿದೆ.

ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ್ ಆಚಾರ್ ಮಾತನಾಡಿ, ತಾಲೂಕು ಹಕ್ಕೊತ್ತಾಯ ಸಭೆಯನ್ನು ಯಶಸ್ವಿಗೊಳಿಸಲು ವಕೀಲರ ಸಂಘ ಸಂಪೂರ್ಣ ಸಹಕಾರ ನೀಡಲಿದೆ. ಕರಾವಳಿಯ ನ್ಯಾಯಾಂಗ ವ್ಯವಸ್ಥೆಗೆ ಅನುಕೂಲವಾಗುವ ಈ ಮಹತ್ವದ ಹೋರಾಟಕ್ಕೆ ತಾಲೂಕಿನ ಎಲ್ಲ ಸಂಘ-ಸಂಸ್ಥೆಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ನ್ಯಾಯವಾದಿ ಸುನಿಲ್ ಕುಮಾರ್ ಶೆಟ್ಟಿ, ಶೇಖರ್ ಮಡಿವಾಳ, ಸದಾನಂದ ಸಾಲಿಯಾನ್, ರವೀಂದ್ರ ಮೊಯಿಲಿ, ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಕಮಲಾಕ್ಷ ಕಾಮತ್, ರಾಜಕೀಯ ಮುಖಂಡ ಶುಭದ ರಾವ್, ನಿವೃತ್ತ ಪ್ರಾಂಶುಪಾಲೆ ಮಿತ್ರಪ್ರಭಾ ಹೆಗ್ಡೆ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು, ಮಾಜಿ ಕೌನ್ಸಿಲರ್ ಅವಿನಾಶ್ ಜಿ. ಶೆಟ್ಟಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದು, ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಕಾರ್ಯದರ್ಶಿ ಪದ್ಮಪ್ರಸಾದ್ ಜೈನ್ ಸ್ವಾಗತಿಸಿ, ಹರೀಶ್ ಅಧಿಕಾರಿ ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page