
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆಯಾಗಲಿದೆ. ಕರಾವಳಿ ಭಾಗಗಳಲ್ಲೂ ಗುಡುಗು ಸಹಿತ ಮಿಂಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು ಚಾಮರಾಜನಗರ ಕೊಡಗು ಹಾಸನ ಮಂಡ್ಯ ಕೋಲಾರ ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

























