26.8 C
Udupi
Friday, November 6, 2026
spot_img
spot_img
HomeBlogಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಹತ್ಯಾಕಾಂಡ..!

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಹತ್ಯಾಕಾಂಡ..!

ಪತ್ನಿಯ ಮೇಲಿನ ಸಿಟ್ಟಿಗೆ ಇಡೀ ಕುಟುಂಬವೇ ಬಲಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಶ್ರೀರಾಮಪುರದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೇಖರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ಪತ್ನಿ ಸುನಿತಾಳ ತಲೆಗೆ ರುಬ್ಬುವ ಕಲ್ಲಿನಿಂದ ಹೊಡೆದು ಹತ್ಯೆಗೈದಿದ್ದಾನೆ. ಬಳಿಕ ಶವವನ್ನು ಕಾರಿನಲ್ಲಿ ನಂದಿ ಬೆಟ್ಟಕ್ಕೆ ಕೊಂಡೊಯ್ದು ಎಸೆದಿದ್ದಾನೆ ಎನ್ನಲಾಗಿದೆ. ನಂತರ ಬಾಮೈದ ಶಿವಕುಮಾರ್, ಶಂಕರ್ ಅವರ ಪತ್ನಿ ದಿವ್ಯಾ ಹಾಗೂ ನಳಿನಿಯನ್ನು ಪ್ರತ್ಯೇಕವಾಗಿ ಮನೆಗೆ ಕರೆಸಿ ಹತ್ಯೆ ಮಾಡಿದ್ದಾನೆ. ಬಳಿಕ ಮನೆಗೆ ಬಂದ ಅತ್ತೆ ರೂಪವತಿ ಹಾಗೂ ಶಂಕರ್ ಅವರ 7 ವರ್ಷದ ಪುತ್ರ ಪುನೀತ್‌ನನ್ನೂ ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಆರೋಪಿ ಶೇಖರ್‌ನನ್ನು ಬಂಧಿಸಿದ್ದಾರೆ. ಕೇವಲ ಎರಡು ದಿನಗಳ ಅವಧಿಯಲ್ಲಿ ಸರಣಿ ಹತ್ಯೆಗಳನ್ನು ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಈ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಒಂದು ಶವ ಮಾತ್ರ ಪತ್ತೆಯಾಗಿದ್ದು, ಉಳಿದವರ ಮೃತದೇಹಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page