32 C
Udupi
Friday, November 6, 2026
spot_img
spot_img
HomeBlogಕುಕ್ಕೆ ಸುಬ್ರಹ್ಮಣ್ಯದಲ್ಲಿ ಪವಾಡಸದೃಶ ಘಟನೆ,

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪವಾಡಸದೃಶ ಘಟನೆ,

ಆತ್ಮಹತ್ಯೆಗೆ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ;

ಕೂದಲೆಳೆ ಅಂತರದಲ್ಲಿ ಪಾರು!

ಮಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಕುಮಾರಧಾರ ನದಿಗೆ ಹಾರಿದ ಮಹಿಳೆಯೊಬ್ಬರು ಮೊಸಳೆಯ ದಾಳಿಗೂ ಸಿಲುಕಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಉಡುಪಿ ಮೂಲದ 38 ವರ್ಷದ ರೇಖಾ ಬದುಕುಳಿದ ಮಹಿಳೆ. ಬುಧವಾರ ಕುಟುಂಬದವರೊಂದಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಅವರು, ರಾತ್ರಿ ಪತಿಯೊಂದಿಗೆ ಕೌಟುಂಬಿಕ ವಿಚಾರವಾಗಿ ಜಗಳ ಮಾಡಿಕೊಂಡಿದ್ದರು. ಇದರಿಂದ ಮನನೊಂದ ರೇಖಾ, ರಾತ್ರಿ ವೇಳೆ ಕುಮಾರಧಾರ ನದಿಯ ಸೇತುವೆಯಿಂದ ನೀರಿಗೆ ಹಾರಿದ್ದರು.

ಆದರೆ, ನದಿಗೆ ಹಾರುತ್ತಿದ್ದಂತೆ ಅಲ್ಲಿದ್ದ ಮೊಸಳೆಯೊಂದು ರೇಖಾ ಅವರ ಮೇಲೆ ದಾಳಿ ನಡೆಸಿದೆ. ಇದರಿಂದ ಭಯಭೀತರಾದ ಅವರು ರಕ್ಷಣೆಗಾಗಿ ಜೋರಾಗಿ ಕೂಗಿಕೊಂಡಿದ್ದಾರೆ. ಮಹಿಳೆಯ ಆಕ್ರಂದನ ಕೇಳಿದ ಸಮೀಪದ ಖಾಸಗಿ ಲಾಡ್ಜ್‌ನ ಸಿಬ್ಬಂದಿ ತಕ್ಷಣ ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಸ್ಥಳೀಯ ಈಜುಗಾರರು ಹಗ್ಗದ ಸಹಾಯದಿಂದ ಮೊಸಳೆಯನ್ನು ದೂರ ಓಡಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ನೀರಿನಲ್ಲಿ ಸಿಲುಕಿದ್ದ ರೇಖಾ ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ಮೊಸಳೆಯ ದಾಳಿಯಿಂದ ಸಣ್ಣಪುಟ್ಟ ಗಾಯಗಳಾಗಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಮಹಿಳೆಯ ಮೇಲೆ ದಾಳಿ ನಡೆಸಿದ್ದು ಚಿಕ್ಕ ವಯಸ್ಸಿನ ಮೊಸಳೆಯಾಗಿರುವ ಸಾಧ್ಯತೆಯಿದೆ. ಹೀಗಾಗಿ ಗಂಭೀರ ಅಪಾಯ ಸಂಭವಿಸದೆ ಅವರು ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಚಿಕಿತ್ಸೆಯ ಬಳಿಕ ರೇಖಾ ಅವರಿಗೆ ಕೌನ್ಸೆಲಿಂಗ್ ನಡೆಸಿ ಕುಟುಂಬಸ್ಥರೊಂದಿಗೆ ಕಳುಹಿಸಿಕೊಡಲಾಗಿದೆ. ಈ ಸಂಬಂಧ ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page