
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಕರಾವಳಿಯ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು ,ಹಾಸನ ,ಕೊಡಗು, ಮೈಸೂರು, ಶಿವಮೊಗ್ಗ ,ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಯಾಗಲಿದೆ. ಚಿತ್ರದುರ್ಗ, ಚಿಕ್ಕಬಳ್ಳಾಪುರ ,ತುಮಕೂರು ,ವಿಜಯನಗರ ,ಬಳ್ಳಾರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

























