
ಹೊಸದಿಲ್ಲಿ: ಸಿಬಿಎಸ್ಇ 10 ಮತ್ತು 12ನೇ ತರಗತಿಯ 2027ರ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 16ರಿಂದ ಆರಂಭವಾಗಲಿವೆ. ಈ ಕುರಿತು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಶುಕ್ರವಾರ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಪರೀಕ್ಷಾ ವೇಳಾಪಟ್ಟಿಯ ಪ್ರಕಾರ, 10ನೇ ತರಗತಿಯ ಪರೀಕ್ಷೆಗಳು ಮಾರ್ಚ್ 9ರಂದು ಮುಕ್ತಾಯಗೊಳ್ಳಲಿದ್ದು, 12ನೇ ತರಗತಿಯ ಪರೀಕ್ಷೆಗಳು ಏಪ್ರಿಲ್ 9ರವರೆಗೆ ನಡೆಯಲಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಸಿಬಿಎಸ್ಇ ಪರೀಕ್ಷಾ ನಿಯಂತ್ರಕ ಸನ್ಯಮ್ ಭಾರದ್ವಾಜ್, 10ನೇ ತರಗತಿಯಲ್ಲಿ 83 ವಿಷಯಗಳಿಗೆ ಹಾಗೂ 12ನೇ ತರಗತಿಯಲ್ಲಿ 121 ವಿಷಯಗಳಿಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಪರೀಕ್ಷೆ ಆರಂಭವಾಗಲು 101 ದಿನಗಳ ಮುಂಚಿತವಾಗಿಯೇ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಮಾಡಿಕೊಳ್ಳಲು ಸಾಕಷ್ಟು ಸಮಯಾವಕಾಶ ಕಲ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

























