
ರಾಜ್ಯದಲ್ಲಿ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವಂಬರ್ 8 ಮತ್ತು 9 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.





































