
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ, ಉಡುಪಿ ಇವರ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಬಾಲ ಪ್ರತಿಭೆ, ಕಿಶೋರ ಪ್ರತಿಭೆ, ಯುವ ಪ್ರತಿಭೆ ಚಿತ್ರಕಲಾ ಸ್ಪರ್ಧೆ ನಡೆಯಿತು. ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ 9ನೇ ತರಗತಿಯ ಮಾನ್ವಿ ಡಿ ಇವರು ಪ್ರಥಮ ಸ್ಥಾನವನ್ನು ಗಳಿಸಿ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಯವರು, ಶಾಲಾ ಆಡಳಿತ ಮಂಡಳಿಯ ಸದಸ್ಯರು ಮುಖ್ಯೋಪಾಧ್ಯಾಯರು ಶಾಲಾ ಆಡಳಿತಾಧಿಕಾರಿ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.





















































































