
ರಾಜ್ಯದ ಹಲವು ಭಾಗಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಕೊಡಗು,ಹಾಸನ, ಮೈಸೂರು ಸೇರಿದಂತೆ ಆರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.





















































































