
ಕಾರ್ಕಳ: ಕಾಳಿಕಾಂಬ ಕರಿಯಕಲ್ಲು ಯುವಶಕ್ತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಒಗ್ಗೂಡಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಹಳೆ ವಿದ್ಯಾರ್ಥಿಗಳೆಲ್ಲರೂ ಸೇರಿ ದೀಪಗಳನ್ನು ಬೆಳಗಿಸುವ ಮೂಲಕ ಬೆಳಕಿನ ಹಬ್ಬಕ್ಕೆ ವಿಶೇಷ ಮೆರುಗು ನೀಡಿದರು. ಹಳೆ ವಿದ್ಯಾರ್ಥಿಗಳ ಒಗ್ಗಟ್ಟು, ಸ್ನೇಹ ಹಾಗೂ ಶಾಲೆಯೊಂದಿಗಿನ ಒಡನಾಟವನ್ನು ಈ ಆಚರಣೆ ಮತ್ತೊಮ್ಮೆ ಸ್ಮರಿಸುವಂತೆ ಮಾಡಿತು





















































































