
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಚೇರಿ, ರಜತಾದ್ರಿ, ಮಣಿಪಾಲ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೈಂದೂರು ಹಾಗೂ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ, ಅತ್ರಾಡಿ, ವಂಡ್ಸೆ ಇವರ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಶಾಲೆಯ 10ನೇ ತರಗತಿಯ ಮಾನ್ವಿ ಜಿ. ಅವರು ಆರ್ಟಿಸ್ಟಿಕ್ ಪೇರ್ ಹಾಗೂ ರಿದಮಿಕ್ ಪೇರ್ ಯೋಗಾಸನ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
8ನೇ ತರಗತಿಯ ಶಾರ್ವಿ ಹೆಗ್ಡೆ ಅವರು ಆರ್ಟಿಸ್ಟಿಕ್ ಪೇರ್ ಹಾಗೂ ರಿದಮಿಕ್ ಪೇರ್ ಯೋಗಾಸನ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಮತ್ತು ಟ್ರೆಡಿಷನಲ್ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
7ನೇ ತರಗತಿಯ ಮೇಗನ್ ಪೂಜಾರಿ ಮತ್ತು ಹನೀಶ್ ಕುಮಾರ್ ಅವರು ಆರ್ಟಿಸ್ಟಿಕ್ ಪೇರ್ ಹಾಗೂ ರಿದಮಿಕ್ ಪೇರ್ ಯೋಗಾಸನ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರು, ಮುಖ್ಯೋಪಾಧ್ಯಾಯರು, ಶಾಲಾ ಆಡಳಿತಾಧಿಕಾರಿ, ಯೋಗ ಶಿಕ್ಷಕಿ ಶ್ರೀಮತಿ ಶಿಲ್ಪಾ ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದ ಮಾನ್ವಿ ಜಿ. ಮತ್ತು ಶಾರ್ವಿ ಹೆಗ್ಡೆ ಅವರಿಗೆ ಮುಂದಿನ ಸ್ಪರ್ಧೆಯಲ್ಲಿ ಯಶಸ್ಸು ದೊರೆಯಲಿ ಎಂದು ಶಾಲಾ ಕುಟುಂಬ ಶುಭ ಹಾರೈಸಿದೆ.





















































































