
ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ದಿಂದ ಉದ್ಯೋಗವಕಾಶದ ಮಾಹಿತಿ ಲಭ್ಯವಾಗಿದೆ. ತಾಂತ್ರಿಕ ಮತ್ತು ತಾಂತ್ರಿಕೇತರ ವಿಭಾಗಗಳಲ್ಲಿ ಒಟ್ಟು 5,431 ಹುದ್ದೆಗಳ ನೇಮಕಾತಿ ನಡೆಯಲಿದೆ.
ಹುದ್ದೆಗಳ ವಿವರ: FDA, SDA ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿದ್ದು ನೇಮಕಾತಿ ರಾಜ್ಯಾದ್ಯಂತ ನಡೆಯಲಿದೆ. ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ. 2ಎ, 2ಬಿ, 3ಎ, 3ಬಿ ವರ್ಗದವರಿಗೆ 3 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಶೇಷ ಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ನವೆಂಬರ್ 25, 2026 ಕೊನೆಯ ದಿನಾಂಕವಾಗಿದ್ದು ನವೆಂಬರ್ 8, 9, 10, 16 ಹಾಗೂ 2027ರ ಜನವರಿ 17ರಂದು ಪರೀಕ್ಷೆಗಳು ನಡೆಯಲಿವೆ. ಅರ್ಜಿ ಸಲ್ಲಿಸುವ ವಿಧಾನದ ಕುರಿತು ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ವೆಬ್ಸೈಟ್ ಗೆ ಭೇಟಿ ನೀಡಬಹುದು.






















































































