31.9 C
Udupi
Friday, November 13, 2026
spot_img
spot_img
HomeBlog'ಪ್ರಧಾನಿಯೊಂದಿಗೆ ಖಾಸಗಿಯಾಗಿ ನಡೆಸಲಿರುವ ಚರ್ಚೆಯ ವಿಷಯಗಳನ್ನು ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ': ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

‘ಪ್ರಧಾನಿಯೊಂದಿಗೆ ಖಾಸಗಿಯಾಗಿ ನಡೆಸಲಿರುವ ಚರ್ಚೆಯ ವಿಷಯಗಳನ್ನು ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ’: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಶುಕ್ರವಾರ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಗುರುವಾರ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ವೇಳೆ ರಾಜ್ಯದ ಪ್ರಮುಖ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸಲಾಗುವುದು. ಆದರೆ, ಅವರೊಂದಿಗೆ ಖಾಸಗಿಯಾಗಿ ನಡೆಸಲಿರುವ ಚರ್ಚೆಯ ವಿಷಯಗಳನ್ನು ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಪ್ರಧಾನಿಯವರೊಂದಿಗೆ ಪ್ರತ್ಯೇಕ ಸಭೆ ನಡೆಸಲು ಸಮಯ ಕೇಳಿದ್ದೇನೆ. ಇದಕ್ಕಾಗಿ ದೆಹಲಿಗೆ ಬರುವಂತೆ ಅವರು ಸೂಚಿಸಿದ್ದಾರೆ. ಪ್ರಧಾನಿಯವರೊಂದಿಗೆ ರಾಜ್ಯದ ಕೆಲವು ಪ್ರಮುಖ ವಿಚಾರಗಳನ್ನು ಖಾಸಗಿಯಾಗಿ ಚರ್ಚಿಸುವ ಉದ್ದೇಶವಿದೆ. ಈ ಮಾತುಕತೆಯ ವಿವರಗಳನ್ನು ಬಹಿರಂಗಪಡಿಸುವುದು ಸೂಕ್ತವಲ್ಲ. ಕೆಲವು ಮಹತ್ವದ ವಿಷಯಗಳನ್ನು ಅವರ ಗಮನಕ್ಕೆ ತರಲು ಬಯಸಿದ್ದೇನೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.

ಶುಕ್ರವಾರ ಬೆಂಗಳೂರಿನ ಪ್ರಶಾಂತಿ ಕುಟೀರಂನಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಬಳಿಕ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಚಾಲನೆ ನೀಡಿ, ತಾವರೆಕೆರೆ ನಿಲ್ದಾಣದಿಂದ ಐಐಎಂ ಬೆಂಗಳೂರು ನಿಲ್ದಾಣದವರೆಗೆ ಮೆಟ್ರೋದಲ್ಲಿ ಸಂಚರಿಸಲಿದ್ದಾರೆ.

ಇದರೊಂದಿಗೆ ಬೆಂಗಳೂರಿನಲ್ಲಿ 15,600 ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ರಾಷ್ಟ್ರಕ್ಕೆ ಸಮರ್ಪಣೆ ಮಾಡಲಿದ್ದಾರೆ. ನಂತರ ಮೈಸೂರಿಗೆ ತೆರಳಿ ಕಾಸ್ಮೋಸ್-ಮೈಸೂರು ತಾರಾಲಯವನ್ನು ಉದ್ಘಾಟಿಸಲಿದ್ದಾರೆ.

ಸುಮಾರು 3,470 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 7.5 ಕಿ.ಮೀ. ಉದ್ದದ ಎಲಿವೇಟೆಡ್ ಪಿಂಕ್ ಲೈನ್ ಅನ್ನು ಪ್ರಧಾನಿ ಲೋಕಾರ್ಪಣೆ ಮಾಡಲಿದ್ದಾರೆ.

ರಾಜ್ಯದ ಆರ್ಥಿಕ ನೆರವು, ಬರ ಪರಿಹಾರಕ್ಕೆ ಮನವಿ:

ರಾಜ್ಯಕ್ಕೆ ಆರ್ಥಿಕ ನೆರವು ಹಾಗೂ ಬರ ಪರಿಹಾರ ನೀಡುವಂತೆ ಪ್ರಧಾನಿಯವರಲ್ಲಿ ಮನವಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ರಾಜ್ಯದ ಸಮಸ್ಯೆಗಳನ್ನು ಅವರ ಗಮನಕ್ಕೆ ತರುವುದು ಖಚಿತ. ಈ ವಿಚಾರಗಳನ್ನು ಪ್ರಾಮಾಣಿಕವಾಗಿ ಪ್ರಸ್ತಾಪಿಸುವ ಅಗತ್ಯವಿದೆ ಎಂದರು.

ಮೆಟ್ರೋ ಪಿಂಕ್ ಲೈನ್ ಉದ್ಘಾಟನೆಯು ಕರ್ನಾಟಕಕ್ಕೆ ಹೆಮ್ಮೆಯ ಕ್ಷಣವಾಗಿದ್ದು, ಮೂಲಸೌಕರ್ಯ ಅಭಿವೃದ್ಧಿಯಲ್ಲಿ ರಾಜ್ಯ ಉತ್ತಮ ಪ್ರಗತಿ ಸಾಧಿಸಿದೆ. ರಾಜ್ಯದಲ್ಲಿ ಈಗಾಗಲೇ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಇನ್ನೂ ಸಾಕಷ್ಟು ಯೋಜನೆಗಳು ಕಾರ್ಯಗತಗೊಳ್ಳಬೇಕಿವೆ. ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ಪಿಂಕ್ ಲೈನ್ ಉದ್ಘಾಟನೆ ಸೇರಿದಂತೆ ಬೆಂಗಳೂರಿನಲ್ಲಿ ಹಾಗೂ ಮೈಸೂರಿನಲ್ಲಿ ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನೆರವೇರಲಿವೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page