
ಗುಜರಾತ್: ರಾಜ್‍ಕೋಟ್‍ನ ಟಿಆರ್‌ಪಿ ಗೇಮಿಂಗ್ ಝೋನ್‌ನಲ್ಲಿ 27 ಮಂದಿಯ ಸಾವಿಗೆ ಕಾರಣವಾದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಧವಲ್ ಠಕ್ಕರ್ ರಾಜಸ್ಥಾನದ ಅಬು ರಸ್ತೆಯಲ್ಲಿ ಬಂಧಿಸಲಾಗಿದೆ. ಈತ ರಾಜಸ್ಥಾನದ ಸಂಬಂಧಿಕರ ಮನೆಯಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಮಾಹಿತಿಯ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.