
ರಾಜ್ಯದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಉತ್ತರವಳ ನಾಡಿನ ಬಾಗಲಕೋಟೆ ಬೆಳಗಾವಿ, ಬೀದರ್, ಧಾರವಾಡ ಗದಗ, ಹಾವೇರಿ ,ಕಲಬುರಗಿ ,ಕೊಪ್ಪಳ ,ರಾಯಚೂರು ,ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಚಿತ್ರದುರ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಕಡಿಮೆಯಾಗಲಿದೆ.
ಬೆಳಗಾವಿ ಶಿವಮೊಗ್ಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 12.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.






















































































