
ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಂಡ್ಯ ಆದಿ ಚುಂಚನಗಿರಿ ಮಹಾ ಸ್ಥಾನ ಮಠ, ಜಿಲ್ಲಾ ಶಿಕ್ಷಣಾಧಿಕಾರಿಗಳ ಕಚೇರಿ ಮಂಡ್ಯ ಇವರ ಸಹಯೋಗದಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ 10ನೇ ತರಗತಿಯ ಕು /ಮಾನ್ವಿ ಜಿ ಹಾಗೂ 8ನೇ ತರಗತಿಯ ಕು / ಶಾರ್ವಿ ಆರ್ಟಿಸ್ಟಿಕ್ ಪೇರ್ ಮತ್ತು ರಿದಮಿಕ್ ಪೇರ್ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿಯವರು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಮುಖ್ಯೋಪಾಧ್ಯಾಯರು ಶಾಲಾ ಆಡಳಿತ ಅಧಿಕಾರಿ ಶಾಲಾ ಹಾಗೂ ಯೋಗ ಶಿಕ್ಷಕಿ ಶ್ರೀಮತಿ ಶಿಲ್ಪಾ ಶೆಟ್ಟಿ ಅವರು ಅಭಿನಂದಿಸಿದರು.






















































































