
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳೇ ಹೆಚ್ಚು ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿರುವುದರಿಂದ ಇದರಿಂದ ಅಪಾಯಕ್ಕೆ ಸಿಲುಕಿಕೊಳ್ಳುವ ಸಂಭವ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಒಕ್ಕೂಟದಿಂದ ಪೋಷಕರಿಗೆ ಎಚ್ಚರಿಕೆ ಸಂದೇಶವೊಂದು ರವಾನೆ ಮಾಡಿದ್ದು ಮಕ್ಕಳು ಹೆಚ್ಚಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ತಾವು ತೊಡಗಿಕೊಳ್ಳುತ್ತಿದ್ದು, ಇದರಿಂದ ಅಪಾಯ ಬಂದೊದಗಬಹುದಾದ ಸಾಧ್ಯೆತೆ ಇದೆ. ಹೀಗಾಗಿ ಮಕ್ಕಳ ಬಗ್ಗೆ ಎಚ್ಚರ ವಹಿಸಿ ಎಂದು ಪತ್ರದ ಮೂಲಕ ಎಚ್ಚರಿಸಿದೆ.
ಮಕ್ಕಳಿಗೆ ಸಾಮಾಜಿಕ ಜಾಲತಾಣದ ಗೀಳು ಅತಿಯಾಗುತ್ತಿದ್ದು ಇದರಿಂದ ತಂತ್ರಜ್ಞಾನದ ದುರ್ಬಳಕೆಯಾಗುತ್ತಿದೆ. ಗುಪ್ತವಾಗಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ, ಬೇರೆ ಬೇರೆ ಹೆಸರುಗಳನ್ನಿಟ್ಟು ಪೋಷಕರಿಗೆ ಗೊತ್ತಿಲ್ಲದೆ ಆಕ್ಟೀವ್ ಆಗಿದ್ದಾರೆ.
“ಸಾಮಾಜಿಕ ಜಾಲತಾಣದಲ್ಲಿ ಬೈದಾಡುವುದು, ದ್ವೇಷ ಸಾಧಿಸುವುದು, ಅವಮಾನಿಸುವ ಪ್ರಸಂಗ ಹೆಚ್ಚಾಗಿದೆ, ಅಪ್ರಾಪ್ತ ವಿದ್ಯಾರ್ಥಿಗಳು ಈ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದ್ದಾರೆ. ಆನ್‌ಲೈನ್ ವ್ಯಾಪಾರಗಳು, ಆನ್‌ಲೈನ್ ಆಟಗಳು, ಆನ್‌ಲೈನ್ ಜೂಜಾಟ, ಮುಂತಾದವುಗಳಲ್ಲಿ 5-6ನೇ ತರಗತಿ ವಿದ್ಯಾರ್ಥಿಗಳು ತೊಡಗಿಸಿಕೊಂಡಿದ್ದಾರೆ. ತಂದೆ ತಾಯಿಗೆ ಗೊತ್ತಿಲ್ಲದೆ ತಮ್ಮ ಮೊಬೈಲ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅನೇಕ ಶಿಕ್ಷಣ ಸಂಸ್ಥೆಗಳಲ್ಲಿ ಇಂಥ ಪ್ರಕರಣಗಳು ಬೆಳಕಿಗೆ ಬಂದಿವೆ. ಹೀಗಾಗಿ ಮಕ್ಕಳ ಬಗ್ಗೆ ಜಾಗರೂಕರಾಗಿರಿ” ಎಂದು ಖಾಸಗಿ ಶಾಲಾ ಒಕ್ಕೂಟ ಪತ್ರ ಬರೆದಿದೆ.