
ರಾಜ್ಯ ಬಾಲ ಭವನ ಸೊಸೈಟಿ (ರಿ) ಬೆಂಗಳೂರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಬಾಲ ಭವನ ಬ್ರಹ್ಮಗಿರಿ ಉಡುಪಿ ಇಲ್ಲಿ ನಡೆದ ಜಿಲ್ಲಾಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಸೃಜನಾತ್ಮಕ ಕಲೆ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಕು / ಮಾನ್ವಿ ದೇವಾಡಿಗ ಹಾಗೂ 9ನೇ ತರಗತಿಯ ಕು / ಇಷ್ಟಾ ಜೈನ್ ಇವರು ದ್ವಿತೀಯ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿಯವರು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಮುಖ್ಯೋಪಾಧ್ಯಾಯರು ಶಾಲಾ ಆಡಳಿತ ಅಧಿಕಾರಿ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.






















































































