ಕಾರ್ಕಳ ಎಸ್ಎನ್ ವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ, ರಾಜ್ಯ ಮಟ್ಟಕ್ಕೆ ಆಯ್ಕೆ

ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳದ ಎಸ್.ಎನ್.ವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ ಮುಂದಿನ ಹಂತದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.
ಈ ಸಾಧನೆಯ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿಗಳಿಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.






















































































