
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆ ಇವರ ಸಂಯುಕ್ತ ಆಶ್ರಯದೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಮಿನಿ ಕರ್ನಾಟಕ ಕ್ರೀಡಾಕೂಟ 2026 ಕರ್ನಾಟಕದ ಐದನೇ ಮಿನಿ ಕ್ರೀಡಾಕೂಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಎಸ್.ವಿ.ಟಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಂಟನೇ ತರಗತಿಯ ಕು. ಮಾನ್ಯ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ. ಸಾಧನೆಗೈದ ವಿದ್ಯಾರ್ಥಿನಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಹಿರಿಯ ಸಹ ಶಿಕ್ಷಕರು, ಅಧ್ಯಾಪಕ , ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.
ಇವರು ನಕ್ರೆ ಜ್ಯೋತಿ ನಗರದ ಶ್ರೀಮತಿ ಪೂರ್ಣಿಮಾ ಮತ್ತು ಜಯರಾಮ ಆಚಾರ್ಯ ಅವರ ಸುಪುತ್ರಿರಾಗಿರುತ್ತಾರೆ.























































































