25.8 C
Udupi
Friday, November 20, 2026
spot_img
spot_img
HomeBlog"ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ ಸಿಕ್ಕಿದೆ...

“ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ ಸಿಕ್ಕಿದೆ ಎಂದು ಭಾವಿಸಬಾರದು” : ಕರ್ನಾಟಕ ಹೈಕೋರ್ಟ್

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆ ಸಂದೇಶಗಳನ್ನು ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿದ್ದ ಮಾತ್ರಕ್ಕೆ ಮನಸ್ಸಿಗೆ ಬಂದದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ ಸಿಕ್ಕಂತಲ್ಲ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಪ್ರಕರಣದ ಹಿನ್ನೆಲೆ:

2025ರ ಏಪ್ರಿಲ್ 24ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ತನುಷ್ ಎಂ. ಶೆಟ್ಟಿ (24) ನೀಡಿದ ದೂರಿನ ಮೇರೆಗೆ ಶುಭಾ ಮತ್ತು ಮೋಹನ್ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ತನುಷ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಹಾಗೂ ಬೆದರಿಕೆಯ ಸಂದೇಶಗಳನ್ನು ಪ್ರಕಟಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಅಲ್ಲದೆ, ಅವರ ಫೋಟೋಗಳನ್ನು ಮಾರ್ಫ್ ಮಾಡಿ ಹಂಚಿಕೊಳ್ಳುವ ಮೂಲಕ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂಬ ಸುಳ್ಳು ಮಾಹಿತಿ ಹರಡಲಾಗಿದೆ. ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಪ್ರಕರಣ, ಹಿಂದೂ ದೇವಾಲಯಗಳಿಗೆ ಅವಮಾನ ಹಾಗೂ ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾನಹಾನಿಕರ ಆರೋಪಗಳನ್ನೂ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ ಎಂದು ದೂರಲಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ರದ್ದುಗೊಳಿಸುವಂತೆ ಆರೋಪಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ತನಿಖೆಗೆ ಹೈಕೋರ್ಟ್ ಅಸ್ತು:

ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠವು, ದೂರುದಾರರ ಆರೋಪಗಳಲ್ಲಿ ಮೇಲ್ನೋಟಕ್ಕೆ ಸತ್ಯಾಂಶ ಇರುವಂತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟಿತು. ಈ ಹಿಂದೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯಿಂದ ಪೊಲೀಸ್ ತನಿಖೆ ಸ್ಥಗಿತಗೊಂಡಿದ್ದು, ಆರೋಪಗಳ ಗಂಭೀರತೆಯನ್ನು ಪರಿಗಣಿಸಿ ಸತ್ಯಾಸತ್ಯತೆ ತಿಳಿಯಲು ತನಿಖೆ ಅಗತ್ಯವಾಗಿದೆ ಎಂದು ಹೇಳಿ ಅರ್ಜಿಗಳನ್ನು ವಜಾಗೊಳಿಸಿತು.

ಇದೇ ವೇಳೆ, ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರುವುದರಿಂದ ಮನಸ್ಸಿಗೆ ಬಂದಂತೆ ಏನು ಬೇಕಾದರೂ ಪೋಸ್ಟ್ ಮಾಡುವ ಹಕ್ಕು ಸಿಗುವುದಿಲ್ಲ. ವಾಕ್ ಸ್ವಾತಂತ್ರ್ಯಕ್ಕೂ ಸಂವಿಧಾನದಲ್ಲಿ ನಿರ್ದಿಷ್ಟ ಮಿತಿಗಳಿವೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page