
ಟೇಕ್ವಾಂಡೋ ಚಾಂಪಿಯನ್ಶಿಪ್ನಲ್ಲಿ ವರ್ಧಮಾನ ಶಿಕ್ಷಣ ಸಂಸ್ಥೆಯ ಸಯ್ಯದ್ ಸದಫ್ ಗೆ ಚಿನ್ನದ ಪದಕ…
ಕಾರ್ಕಳ: ವರ್ಧಮಾನ ಶೈಕ್ಷಣಿಕ ಸಂಸ್ಥೆಗಳ 4ನೇ ತರಗತಿಯ ವಿದ್ಯಾರ್ಥಿ ಸಯ್ಯದ್ ಸದಫ್ ಅವರು ಮಂಗಳೂರಿನ ಲಾಲ್ಬಾಗ್ನ ಯು. ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ 15, 2026ರಂದು ನಡೆದ 6ನೇ ತುಳುನಾಡು ಕಪ್-2026 ಅಂತರರಾಜ್ಯ ಮಟ್ಟದ G-4 ಟೇಕ್ವಾಂಡೋ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕವನ್ನು ಗೆದ್ದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಸೋಸಿಯೇಷನ್ನ ಸಹಯೋಗದೊಂದಿಗೆ ಈ ಚಾಂಪಿಯನ್ಶಿಪ್ ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ನಡುವೆ ಸಯ್ಯದ್ ಸದಫ್ ಅವರು ತಮ್ಮ ಕ್ರೀಡಾ ಕೌಶಲ್ಯ ಮತ್ತು ಪ್ರತಿಭೆಯನ್ನು ಪ್ರದರ್ಶಿಸಿ ಈ ಸಾಧನೆ ಮಾಡಿದ್ದಾರೆ.
ಅವರ ಈ ಯಶಸ್ಸಿಗೆ ಸಂಸ್ಥೆಯ ಮುಖ್ಯಸ್ಥರು, ಆಡಳಿತಾಧಿಕಾರಿಗಳು, ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.
























































































