
ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಗದಗ ,ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲೂ ಒಣಹವೆ ಇರಲಿದೆ.
























































































