23.4 C
Udupi
Saturday, November 21, 2026
spot_img
spot_img
HomeBlog'ಒಬ್ಬ ವಿದ್ಯಾರ್ಥಿ ಇದ್ದರೂ ಸರ್ಕಾರಿ ಶಾಲೆ ಮುಚ್ಚಲ್ಲ': ಸಚಿವ ಮಧು ಬಂಗಾರಪ್ಪ

‘ಒಬ್ಬ ವಿದ್ಯಾರ್ಥಿ ಇದ್ದರೂ ಸರ್ಕಾರಿ ಶಾಲೆ ಮುಚ್ಚಲ್ಲ’: ಸಚಿವ ಮಧು ಬಂಗಾರಪ್ಪ

ರಾಯಚೂರು: ರಾಜ್ಯದ ಯಾವುದೇ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿ ಇದ್ದರೂ ಶಿಕ್ಷಕರು ಹಾಗೂ ಬಿಸಿಯೂಟದ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ರಾಯಚೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಮಾಧ್ಯಮದಲ್ಲಿಯೂ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಮಕ್ಕಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.

ಎಲ್‌ಕೆಜಿಯಿಂದ ಪಿಯುಸಿವರೆಗೆ 14 ವರ್ಷಗಳ ಶಿಕ್ಷಣ ಒಂದೇ ಆವರಣದಲ್ಲಿ ದೊರೆಯಲಿದ್ದು, ಎಲ್ಲ ವಿಷಯಗಳಿಗೂ ಪ್ರತ್ಯೇಕ ಶಿಕ್ಷಕರನ್ನು ನೇಮಿಸುವ ವ್ಯವಸ್ಥೆ ಮಾಡಲಾಗುತ್ತದೆ. ಖಾಸಗಿ ಶಾಲೆಗಳಿಗೆ ಸರಿಸಮನಾದ ಶೈಕ್ಷಣಿಕ ವಾತಾವರಣ ಮತ್ತು ಮೂಲಸೌಕರ್ಯವನ್ನು ಸರ್ಕಾರಿ ಶಾಲೆಗಳಲ್ಲಿಯೂ ನಿರ್ಮಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು.

ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸುವುದಕ್ಕೂ ಆದ್ಯತೆ ನೀಡಲಾಗುವುದು. ಸರ್ಕಾರಿ ಶಾಲೆಗಳನ್ನು ಬಲಪಡಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸಲಾಗುತ್ತದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಯಾವುದೇ ಶಾಲೆಯನ್ನು ಮುಚ್ಚುವುದಿಲ್ಲ. ಈ ಬಗ್ಗೆ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವರು ಭರವಸೆ ನೀಡಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page