
ರಾಜ್ಯದಲ್ಲಿ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ 11.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ,ರಾಮನಗರ, ಚಾಮರಾಜನಗರ, ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

























































































